ಬೆಂಗಳೂರು: ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ. ವರದಿಯೊಂದರ ಪ್ರಕಾರ, 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87,000 ರೂಪಾಯಿಗಿಂತ ಕಡಿಮೆ ಇದೆ. ದೇಶದಲ್ಲಿ ಅಸಮಾನತೆ ಅಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದಂತ ಅವರು, ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ. ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವವನ್ನು ನಾವು ಜಾರಿ ಮಾಡಿದ್ದೇವೆ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ. ನೀವು ಸಮಾಜದ 10% ಜನರಿಗೆ ಶಕ್ತಿ ತುಂಬುತ್ತಿದ್ದೀರಿ ಎಂದರು.
1994 ರಲ್ಲಿ 34% ಇದ್ದ ಶ್ರೀಮಂತರ ಸಂಖ್ಯೆ ಈಗ 57% ಗೆ ಹೆಚ್ಚಾಗಿದೆ. 50% ಜನರಿಗೆ ಇರುವ ಆರ್ಥಿಕ ಶಕ್ತಿ 15% ಗೆ ಕುಸಿದಿದೆ. ಇದು ಆತಂಕಕಾರಿ ಸಂಗತಿ ಅಲ್ಲವೇ? ಶ್ರೀಮಂತರು ಶ್ರೀಮಂತರಾದರೆ, ಬಡವರು ಬಡವರಾಗುತ್ತಿದ್ದಾರೆ. ಈ ಅಸಮಾನತೆಯನ್ನು ತೊಡೆದು ಹಾಕಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ. ವರದಿಯೊಂದರ ಪ್ರಕಾರ, 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87,000 ರೂಪಾಯಿಗಿಂತ ಕಡಿಮೆ ಇದೆ. ದೇಶದಲ್ಲಿ ಅಸಮಾನತೆ ಅಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.
ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ… pic.twitter.com/m3lUTYPecJ
— Siddaramaiah (@siddaramaiah) March 19, 2025
‘ತ್ರಿಭಾಷಾ ಸೂತ್ರ’ದಡಿ ಯಾವುದೇ ರಾಜ್ಯದ ಮೇಲೆ ‘ಭಾಷಾ ಒತ್ತಡ’ ಹೇರುವಂತಿಲ್ಲ: ಶಿಕ್ಷಣ ಸಚಿವಾಲಯ ಸ್ಪಷ್ಟನೆ
ಮಹಾಕುಂಭಮೇಳದ ಬಳಿಕ 1,000ಕ್ಕೂ ಹೆಚ್ಚು ಹಿಂದೂ ಭಕ್ತರು ನಾಪತ್ತೆ: ಅಖಿಲೇಶ್ ಯಾದವ್
Crime News: ಕುಡಿಯಲು ಹಣ ನೀಡದ ಚಿಕ್ಕಮ್ಮನಿಗೆ ಬಿಯರ್ ಬಾಟಲಿಯಿಂದ ತಿವಿದು ಕೊಲೆಗೆ ಯತ್ನಿಸಿದ ಯುವಕ