ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ಅವಧಿಯಲ್ಲಿ ನೈತಿಕ ಮೌಲ್ಯದ ಶಿಕ್ಷಣ ಬೋಧನೆಯನ್ನು ಕಡ್ಡಾಯವಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನೈತಿಕ ಮೌಲ್ಯದ ಶಿಕ್ಷಣದ ಜೊತೆಗೆ ಮಕ್ಕಳ ವಯೋಮಾನಕ್ಕೆ ಅನುಗುಣವಾಗಿ 8ರಿಂದ 12ನೇ ತರಗತಿ ಮಕ್ಕಳಿಗೆ ಕಡ್ಡಾಯವಾಗಿ ವಾರದಲ್ಲಿ 2 ದಿನ ಲೈಂಗಿಕ ಶಿಕ್ಷಣ ನೀಡಲಾಗುವುದು. ಲೈಂಗಿಕ ಶಿಕ್ಷಣ ಎಂದರೆ ತಪ್ಪಾಗಿ ಭಾವಿಸುವಂತಿಲ್ಲ. ಮಕ್ಕಳ ವಯಸ್ಸಿಗೆ ಅನುಗುಣವಾಗಿ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳು, ಸಹಜವಾಗಿ ಆಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳ ಬಗ್ಗೆ ತಿಳಿವಳಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.