ಬೆಂಗಳೂರು : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ನಾಳೆ ಕನ್ನಡ ಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಾರಿಗೆ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ನೀಡಿದ್ದು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಹೌದು ಸಾರಿಗೆ ಸಂಘಟನೆಗಳಿಗೆ ಬೆಂಗಳೂರು ಕಮಿಷನರ್ ಬಿ ದಯಾನಂದ್ ನೋಟಿಸ್ ನೀಡಿದ್ದು, ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬಹುದು. ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆ ಮಾಡಂಗಿಲ್ಲ. ಬೇರೆ ಕಡೆ ಪ್ರತಿಭಟನೆ ಮೆರವಣಿಗೆಗಳನ್ನು ಮಾಡುವಂತಿಲ್ಲ.ಅಕಸ್ಮಾತ್ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ. ಹೈ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ನೋಟಿಸ್ ನೀಡಲಾಗಿದೆ. ಸಾರಿಗೆ ಸಂಘಟನೆಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.