ತುಮಕೂರು : ತುಮಕೂರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಅತ್ಯಾಚಾರ ವೆಸಗಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ದೇವರಾಜು (25) ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.