ಮೈಸೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಚಿಕ್ಕಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಇನ್ನು ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಗಳನ್ನು ತಡೆದು ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಿಕ್ಕಮಕಿ ನಡೆಯಿತು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋದ ಘಟನೆ ನಡೆಯಿತು.
ಇನ್ನು ಚಿಕ್ಕಮಗಳೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದರು. ಕನ್ನಡಿಗರ ಮೇಲೆ ಹಲ್ಲೆಯಾದರೂ ಕೂಡ ಈ ಸರ್ಕಾರ ಮೌನವಾಗಿದೆ. ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕು ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಮುಂದೆ ಉತ್ತರ ಸಿಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.