ಬೆಂಗಳೂರು : ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ ಈ ಒಂದು ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ಸಂಜೆ ಮನೆಯಲ್ಲಿ ಶಿಲ್ಪಾ(35) ಅನುಮಾನಾಸ್ಸಾದವಾಗಿ ಮೃತಪಟ್ಟಿದ್ದಾರೆ.ಪತಿಯ ಮನೆಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.