ಚಿಕ್ಕಬಳ್ಳಾಪುರ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ಇನ್ನು ಹಲವು ಜಿಲ್ಲೆಗಳಲ್ಲಿ ನೀರು ಪ್ರತಿಕ್ರಿಯೆ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.
ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೆ ಶಾಲೆ ಮತ್ತು ಕಾಲೇಜಿಗೆ ತೆರಳಿ. ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಮಾಹಿತಿ ನೀಡಿದರು