ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದ್ದು ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಕೇರಳ ಮೂಲದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಈಕೆ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ.
ಈ ವೇಳೆ ಕಾಲೇಜಿನ 4ನೇ ಮಹಡಿಯಿಂದ ಬಿದ್ದು ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಳಗೆ ಬಿದ್ದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕೂಡ ಲಕ್ಷ್ಮಿ ಬದುಕುಳಿಯಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.