Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಂದೇ ಭಾರತ್’ನಲ್ಲಿ ಕಳಪೆ ಆಹಾರ ನೀಡಿದ ‘IRCTC’ಗೆ ಬಿಗ್ ಶಾಕ್ ; 10 ಲಕ್ಷ ರೂ. ದಂಡ ವಿಧಿಸಿ ಭಾರತೀಯ ರೈಲ್ವೆ ಆದೇಶ

25/03/2026 10:23 PM

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM

‘ನಮ್ಮದು ಪಾಕಿಸ್ತಾನದಂತೆ ‘ದಲ್ಲಾಳಿ’ ದೇಶವಲ್ಲ’ ; ಸರ್ವಪಕ್ಷ ಸಭೆಯಲ್ಲಿ ‘ಜೈಶಂಕರ್’ ಹೀಗೆ ಹೇಳಿದ್ಹೇಕೆ.?

25/03/2026 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ 3 ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
KARNATAKA

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ 3 ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

By kannadanewsnow0923/03/2025 2:38 PM

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸೋಮವಾರ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಹಾಗೂ ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.

ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಬೇಟಿ ಬಚಾವೊ, ಬೇಟಿ ಫಡಾವೊ ಕಾರ್ಯಕ್ರಮದಡಿ ಹೆಣ್ಣು ಮಗುವಿನ ಹೆಸರಿನಲ್ಲಿ ಗಿಡವನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದ ಸಚಿವರು, ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕು ಎಂದು ಮನವಿ ಮಾಡಿದರು.

ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ ಮೂರು ಸಾವಿರ ಗರ್ಭಿಣಿಯರಿಗೆ ಸಾಮೂಹಿಕವಾಗಿ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿದೆ‌‌. ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದ್ದು, ಮೊದಲ ಯತ್ನವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಶುರು ಮಾಡಲಾಗುತ್ತಿದೆ. ಸೀಮಂತ ಕಾರ್ಯಕ್ರಮಕ್ಕೆ ಆಗಮಿಸುವ ಗರ್ಭಿಣಿಯರ ಸಂಪೂರ್ಣ ಆರೈಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು‌ ನೋಡಿಕೊಳ್ಳುತ್ತಾರೆ ಎಂದರು.

6ನೇ ಗ್ಯಾರಂಟಿ ಬಗ್ಗೆ ಸಿಎಂ ನಿರ್ಧಾರ

ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು. 2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವರು ತಿಳಿಸಿದರು.‌

ಸುದ್ದಿ ಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಸಚಿವರ ಮಾಧ್ಯಮ ಸಲಹೆಗಾರರಾದ ಎಂ.ಕೆ.ಹೆಗಡೆ, ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್ ಉಪಸ್ಥಿತರಿದ್ದರು‌.

ಸಿ.ಪಿ.ಎಡ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಿ.ಪಿ.ಎಡ್ ಆಟದ ಮೈದಾನದಲ್ಲಿ ಬೆಳಗ್ಗೆ 10.30ರಿಂದ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದು, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸ್ಟೋರ್ ರೂಂನಲ್ಲಿ ಯಾವುದೇ ನಗದು ಇರಿಸಿಲ್ಲ, ಸಿಕ್ಕಿಯೂ ಇಲ್ಲ: ನ್ಯಾಯಮೂರ್ತಿ ಯಶವಂತ್ ವರ್ಮಾ

ALERT : ಏಪ್ರಿಲ್ 1 ರಿಂದ ಈ ಫೋನ್ ಸಂಖ್ಯೆಗಳಿಗೆ `Google Pay, Phone Pay’ ಕಾರ್ಯನಿರ್ವಹಿಸಲ್ಲ : ನಿಮ್ಮ ನಂಬರ್ ಇದೆಯಾ ಚೆಕ್ ಮಾಡಿಕೊಳ್ಳಿ.!

Share. Facebook Twitter LinkedIn WhatsApp Email

Related Posts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM1 Min Read

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read
Recent News

BREAKING : ವಂದೇ ಭಾರತ್’ನಲ್ಲಿ ಕಳಪೆ ಆಹಾರ ನೀಡಿದ ‘IRCTC’ಗೆ ಬಿಗ್ ಶಾಕ್ ; 10 ಲಕ್ಷ ರೂ. ದಂಡ ವಿಧಿಸಿ ಭಾರತೀಯ ರೈಲ್ವೆ ಆದೇಶ

25/03/2026 10:23 PM

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM

‘ನಮ್ಮದು ಪಾಕಿಸ್ತಾನದಂತೆ ‘ದಲ್ಲಾಳಿ’ ದೇಶವಲ್ಲ’ ; ಸರ್ವಪಕ್ಷ ಸಭೆಯಲ್ಲಿ ‘ಜೈಶಂಕರ್’ ಹೀಗೆ ಹೇಳಿದ್ಹೇಕೆ.?

25/03/2026 9:23 PM

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM
State News
KARNATAKA

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

By kannadanewsnow0925/03/2026 10:02 PM KARNATAKA 1 Min Read

ನವದೆಹಲಿ: ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಮೈಸೂರು-ಕೆಎಸ್ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್…

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.