ಬೆಂಗಳೂರು : ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ವಶಕ್ಕೆ ಪಡೆದ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೋಲಿಸರು ಅವರನ್ನು ಸ್ಥಳ ಮಹಜರಿಗಾಗಿ ಕರೆದುಕೊಂಡು ಹೋಗಿದ್ದಾರೆ.
ಹೌದು ನಿನ್ನೆ ಬಿಗ್ ಬಾಸ್ ಖ್ಯಾತಿಯ ರಜತ ಹಾಗೂ ವಿನಯ್ ಗೌಡನನ್ನು ಇದೆ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ಮಧ್ಯರಾತ್ರಿ ಮತ್ತೆ ಬಿಡುಗಡೆ ಮಾಡಿದ್ದರು. ಈ ವೇಳೆ ಅವರು, ರೀಲ್ಸ್ ಮಾಡಿದ್ದ ಲಾಂಗ್ ಬದಲಾಗಿ ಫೈಬರ್ ಮಚ್ಚು ಪೊಲೀಸರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಬೆಂಗಳೂರಿನ ಬಸವೇಶ್ವರ ಠಾಣೆಗೆ ವಿಚಾರಣೆಗೆ ಹಾಜರಾದ ರಜತ್ ಹಾಗೂ ವಿನಯ್ ಗೌಡನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ವಶಕ್ಕೆ ಪಡೆದುಕೊಂಡಿದ್ದರು.
ಬಳಿಕ ಸ್ಥಳ ಮಹಜರು ಕರೆದುಕೊಂಡು ಹೋಗುವ ಮುನ್ನ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಇಬ್ಬರು ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ನಂತರ ನಾಗರಬಾವಿಯ ಅಕ್ಷಯ ಸ್ಟುಡಿಯೋಗೆ ಇಬ್ಬರನ್ನು ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಸ್ಥಳ ಮಹಜರು ಬಳಿಕ ನ್ಯಾಯಾಲಯಕ್ಕೆ ಇಬ್ಬರನ್ನು ಹಾಜರುಪಡಿಸಲಿದ್ದಾರೆ. ಒಂದು ವೇಳೆ ಸ್ಥಳ ಮಹಜರು ವೇಳೆ ಅಸಲಿ ಮಚ್ಚು ಏನಾದರೂ ಸಿಗದೇ ಹೋದರೆ ಇಬ್ಬರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.