ಬೆಂಗಳೂರು : ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದು, ಏಪ್ರಿಲ್ 15 ರಂದು ಸಿಎಂ ನಿವಾಸದ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಡಿಸೆಂಬರ್ 31 ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ನೌಕರರ ಬೇಡಿಕೆ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು, ಸಂಕ್ರಾಂತಿ ಹಬ್ಬದ ಬಳಿಕ ಕರೆದು ಸಭೆ ನಡೆಸುವುದಾಗಿ ಹೇಳಿದ್ದರು.
ಈಗಾಗಲೇ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಆದರೆ ಕೊಟ್ಟ ಮಾತಿನಂತೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿಲ್ಲ. 2 ತಿಂಗಳು ಕಳೆದ್ರೂ ನೌಕರರನ್ನು ಮಾತುಕತೆಗೆ ಕರೆಯದ ಹಿನ್ನೆಲೆಯಲ್ಲಿ ಏಪ್ರಿಲ್ 15 ರ ಬೆಳಗ್ಗೆ11 ರಿಂದ ಸಂಜೆ 5 ಗಂಟೆಯವರೆಗೆ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಧರಣಿ ಸತ್ಯಾಗ್ರಹಕ್ಕೆ ನೌಕರರು ಮುಂದಾಗಿದ್ದಾರೆ.