ನವದೆಹಲಿ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಒಟ್ಟಿಗೆ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಯ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್ ನಲ್ಲಿ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.