ನವದೆಹಲಿ : ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ.
ದೆಹಲಿಯ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದು, ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಇದಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್ ನಲ್ಲಿ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.