ಹುಬ್ಬಳ್ಳಿ : ಬಡವರಿಗಾಗಿಯೇ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. ಆದರೆ ಕೆಲವರು ಸರ್ಕಾರದಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪಡೆದು ಅದನ್ನು ಮಾರಾಟ ಮಾಡುತ್ತಿದ್ದಾರೆ. ಈಗ ಹುಬ್ಬಳ್ಳಿಯಲ್ಲಿ ಕೆಲ ಮಹಿಳೆಯರು ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿ ಅಕ್ಕಿಯನ್ನು ಪಡೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡುವಾಗ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು 50 ಕೆಜಿ ಅಕ್ಕಿ ಮಾರಾಟ ಮಾಡಲು ಮಹಿಳೆಯರು ಮರುಕಟ್ಟೆಗೆ ಬಂದಿದ್ದರು. ಈ ವೇಳೆ ಅಧಿಕಾರಗಳ ಕೈಗೆ ಮಹಿಳೆಯರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಮಹಿಳೆಯರು ತೀವ್ರ ವಾಗ್ವಾದ ನಡೆಸಿದರು. ಹುಬ್ಬಳ್ಳಿಯಲ್ಲಿ ಬಡವರ ಅಕ್ಕಿಗೆ ದಂಧೆಕೋರರು ಕನ್ನ ಹಾಕಿದ್ದಾರೆ. ಈ ವೇಳೆ ಅಧಿಕಾರಿಗಳು 500 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಸೀಜ್ ಮಾಡಿದ್ದಾರೆ.
ಹಳೆ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಆಹಾರ ಇಲಾಖೆ ಅಧಿಕಾರಿ ವಸುಂಧರಾ ಅವರು ಪ್ರತಿಕ್ರಿಯೆ ನೀಡಿ, ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಈ ರೀತಿ ಮಾರುಕಟ್ಟೆಯಲ್ಲಿ ಬಂದು ಮಾರಾಟ ಮಾಡಬಾರದು ಒಂದು ವೇಳೆ ಮಾರಾಟ ಮಾಡಿದರೆ ಅವರ ವಿರುದ್ಧ ಕಠಿಣವಾದ ಅಂತಹ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆಹಾರ ಇಲಾಖೆ ಅಧಿಕಾರಿ ವಸುಂಧರಾ ಅವರು ಈ ವೇಳೆ ತಿಳಿಸಿದರು.