ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಮುಂದಿನ ಹುದ್ದೆಗೆ ಪದೋನ್ನತಿ ಪಡೆಯಲು ಅರ್ಹತೆಯನ್ನು ನಿಗದಿಪಡಿಸುವ ಸಂಬಂಧ ‘ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯ) ನಿಯಮಗಳು, 2025″ ಎಂಬ ಕರಡು ನಿಯಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಸದರಿ ನಿಯಮಗಳ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ. ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ, ತಮ್ಮ ಇಲಾಖೆಯ ಸಹಮತಿ/ ಅಭಿಪ್ರಾಯ/ ಆಕ್ಷೇಪಣೆ ಇದ್ದಲ್ಲಿ ದಿನಾಂಕ 05.04.2025 ರೊಳಗಾಗಿ ನೀಡುವಂತೆ ತಮ್ಮನ್ನು ಕೋರಿದ್ದಾರೆ.
ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2000 ಹೆಚ್ಚುವರಿ ‘KSRTC ಬಸ್’ ಸಂಚಾರ | KSRTC Bus Service
BIG NEWS : ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ : ಶಾಸಕ ಶಿವರಾಂ ಹೆಬ್ಬಾರ್