ಬೆಳಗಾವಿ : ಕಳೆದ ವರ್ಷ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಬಟ್ಟೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬೆಳಗಾವಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಅಳಿಯನೊಬ್ಬ ರಸ್ತೆಯಲ್ಲೇ ಅತ್ತೆಯ ಬಟ್ಟೆ ಹರಿದು, ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.ಅಳಿಯ ಭೈರು ಮೇತ್ರಿ ಹಾಗೂ ಕುಟುಂಬಸ್ಥರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹೌದು ಪಾಪಿ ಅಳಿಯನೊಬ್ಬ ಕ್ಷುಲ್ಲಕ ಕಾರಣಕ್ಕೆ ಅತ್ತೆಯ ಬಟ್ಟೆ ಹರಿದು, ಬೆತ್ತಲೆಗೊಳಿಸಿ ರಸ್ತೆಯಲ್ಲಢ ಸಾರ್ವಜನಿಕವಾಗಿ ಹಲ್ಲೆಗೈದ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ. 12 ದಿನಗಳ ಹಿಂದೆಯಷ್ಟೇ ಮಹಿಳೆಯ ಮಗಳಿಗೆ ಹೆರಿಗೆಯಾಗಿತ್ತು. ಆದರೆ ಪತ್ನಿಯನ್ನು ಮನೆಗೆ ಕಳುಹಿಸಿಕೊಡುವಂತೆ ಪತಿ ಒತ್ತಾಯಿಸಿದ್ದಾನೆ. ಈ ವೇಳೆ ಅತ್ತೆ, 4 ತಿಂಗಳ ಬಳಿಕ ಕಳುಹಿಸ್ತೇವೆ ಎಂದು ಹೇಳಿದ್ದಾರೆ.
ಹಲ್ಲೆಗೊಳಗಾದ ಮಹಿಳೆ ಹರಿದ ನೈಟಿಯಲ್ಲೇ ಮಹಿಳೆ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನಲ್ಲಿ, ನನ್ನ ಅಳಿಯ ಹಾಗೂ ಆತನ ಕುಟುಂಬಸ್ಥರು ನನ್ನ ಬಟ್ಟೆ ಹರಿದು, ರಸ್ತೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ತಿಳಿಸಿದ್ದಾರೆ.
ಇಷ್ಟಕ್ಕೆ ಸಿಟ್ಟಾದ ಅಳಿಯ ತನ್ನ ಕುಟುಂಬಸ್ಥರ ಜೊತೆ ಸೇರಿ ಅತ್ತೆಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆ ಮತ್ತು ಇಬ್ಬರು ಬಾಲಕಿಯರು ಸೇರಿದಂತೆ ಐವರ ಮೇಲೆ ಹಲ್ಲೆ ಮಾಡಿರುವ ಮಾಡುವ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.