ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಹಳೆ ಏರ್ ಪೋರ್ಟ್ ರಸ್ತೆಯ ಮುಗೇಶ್ ಪಾಳ್ಯ ಸಿಗ್ನಲ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮುರಗೇಶ್ ಪಾಳ್ಯ ಸಿಗ್ನಲ್ ನಲ್ಲಿ ಬೈಕ್ ಸವಾರ ಯೂಟರ್ನ್ ತೆಗೆದುಕೊಳ್ಳುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಯ ನಂತರ ಚಾಲಕ, ನಿರ್ವಾಹಕ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಜೀವನ್ ಭಿಮಾ ನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ