ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ದೂರು ನೀಡದಂತ ಎಂಎಲ್ಸಿ ರಾಜೇಂದ್ರ ಅವರು, ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ.
ಇಂದು ಬೆಂಗಳೂರಲ್ಲಿ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿರುವಂತ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ದೂರು ನೀಡಿದ್ದಾರೆ.
ದೂರಿನ ಜೊತೆಗೆ ಆಡಿಯೋ ಕ್ಲಿಪ್ ಗಳನ್ನು ನೀಡಿದ್ದಾರೆ. ಅಲ್ಲದೇ ನಮ್ಮ ಮನೆಗೆ ಶಾಮಿಯಾನ ಹಾಕಲು ಬಂದಿದ್ದವರು ನನ್ನ ಕೊಲೆಗೆ ಯತ್ನ ಮಾಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಎಂಎಲ್ಸಿ ರಾಜೇಂದ್ರ ಅವರಿಗೆ ತುಮಕೂರು ಎಸ್ಪಿಗೆ ದೂರು ನೀಡುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ. ಹೀಗಾಗಿ ನಾಳೆ ತುಮಕೂರು ಎಸ್ಪಿ ಭೇಟಿಯಾಗಿ ಈ ಸಂಬಂಧ ದೂರು ನೀಡುವುದಾಗಿ ಎಂಎಲ್ಸಿ ರಾಜೇಂದ್ರ ತಿಳಿಸಿದ್ದಾರೆ.
BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO