ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಲುಕಿದಂತಹ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಇದೀಗ ವಜಾಗೊಂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಈ ಕುರಿತು ಆದೇಶ ಹೊರಡಿಸಿದೆ.
ಹೌದು ದುಬೈ ನಿಂದ ಅಕ್ರಮವಾಗಿ ಸುಮಾರು 14 ಕೋಟಿಗೂ ಅಧಿಕ ಅಕ್ರಮ ಚಿನ ಸಾಗಾಣಿ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಸಂಬಂಧ ಅವರು ಜಾಮಿನ್ ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯವು ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.