ಬೆಂಗಳೂರು: ಕರ್ನಾಟಕದ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು, ಸಿಎಂ ಸಿದ್ಧರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ್ತ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು, ಎಸ್ಸಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತಮ್ಮ ಮಧ್ಯಂತರ ವರದಿಯನ್ನು ಸಲ್ಲಿಸಿದರು.
ಮಧ್ಯಂತರ ವರದಿಯ ಶಿಫಾರಸ್ಸುಗಳು ಏನು.?
- ರಾಜ್ಯದಲ್ಲಿ ಎಸ್ಸಿಯಲ್ಲಿರುವಂತ ಉಪ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದಂತ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಲು ಶಿಫಾರಸ್ಸು.
- ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ವೈಜ್ಞಾನಿಕ ಸಮೀಕ್ಷೆಯನ್ನು ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿನಗಳಲ್ಲಿ ಹೊಸದಾದ ಸಮೀಕ್ಷೆ ಮಾಡಬಹುದು ಎಂಬುದಾಗಿ ತಜ್ಞರ ಅಭಿಪ್ರಾಯ.
- ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವಂತ ಪ್ರಶ್ನಾವಳಿ ತಯಾರಿಸಲು ಶಿಫಾರಸ್ಸು
- ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣದ ಕುರಿತು ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು. ಸಿಬ್ಬಂದಿಗೆ ತರಬೇತಿ, ಅಗತ್ಯ ಸಂಪನ್ಮೂಲ ಕ್ರೂಢೀಕರಣದ ಬಗ್ಗೆಯೂ ಶಿಫಾರಸ್ಸು
- ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಸಿರುವಂತ ಮಾನದಂಡಗಳ ಅನುಸಾರ ಎಸ್ಸಿ ಉಪಜಾತಿಗಳ ವರ್ಗೀಕರಣ ಮಾಡಿ, ಮೀಸಲಾತಿ ಪ್ರಮಾಣಕ್ಕೆ ಆದ್ಯತೆ ನೀಡಲು ಶಿಫಾರಸ್ಸು
BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO