ಬೆಂಗಳೂರು : ರಾಜ್ಯದಲ್ಲಿ ಹನಿಟ್ರ್ಯಾಪ್ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಸದನದಲ್ಲೇ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರಸ್ತಾಪಿಸಿದ್ದರು. ಇನ್ನು ಇದೆ ವಿಚಾರವಾಗಿ ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ CID ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.
ಹೌದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.ಈಗಾಗಲೇ ಸಿಐಡಿ ವಿಚಾರಣೆ ಆರಂಭಿ ಸಿದ್ದು, ಈ ಪ್ರಕರಣ ದಲ್ಲಿ ವಿವರಣೆ ಪಡೆಯುವ ಸಂಬಂಧ ಸಚಿವರಿಗೆ ನೋಟಿಸ್ ನೀಡಲು ಮುಂದಾ ಗಿದೆ ಎಂದು ತಿಳಿದು ಬಂದಿದೆ.
2 ದಿನ ಹಿಂದೆ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ಮೇಲೆ ಹನಿ ಟ್ರ್ಯಾಪ್‌ಗೆ ಯತ್ನಿಸಿದವರ ವಿರುದ್ಧ ಕ್ರಮ ಜರುಗಿಸು ವಂತೆ ಮನವಿ ಸಲ್ಲಿಸಿದ್ದರು. ಈ ಪತ್ರವನ್ನು ಸಿಐಡಿಗೆ ಕಳುಹಿಸಿದ ಸರ್ಕಾರವು, ಹನಿಟ್ರ್ಯಾಪ್ ಕುರಿತು ವಿಚಾರಣೆ ನಡೆಸಿ ತ್ವರಿತವಾಗಿ ವರದಿ ನೀಡುವಂತೆ ಸೂಚಿಸಿದೆ.
ಈ ಸೂಚನೆ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ವಂಶಿಕೃಷ್ಣ ನೇತೃತ್ವದ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಕೇಶವಮೂರ್ತಿ ಅವರನ್ನು ಒಳಗೊಂಡ ತಂಡವು, ಜಯಮಹಲ್ ರಸ್ತೆಯಲ್ಲಿರುವ ಸಚಿವರ ಅಧಿಕೃತ ಸರ್ಕಾರಿ ನಿವಾಸಕ್ಕೆ ತೆರಳಿ ಪ್ರಾಥಮಿಕ ಹಂತದ ಮಾಹಿತಿ ಕಲೆ ಹಾಕಿತು. ಆ ಮನೆಯ ಭದ್ರತಾ ಸಿಬ್ಬಂದಿ ಹಾಗೂ ಮನೆ ಕೆಲಸಗಾರರನ್ನು ವಿಚಾರಣೆ ನಡೆಸಿ ಘಟನೆ ಕುರಿತು ವಿವರ ಸಂಗ್ರಹಿಸಿ ಅಧಿಕಾರಿಗಳು ಮರಳಿದ್ದಾರೆ.