ಬೆಂಗಳೂರು : ಬಿಜೆಪಿಯ ಶಾಸಕ ಉದಯ್ ಗರುಡಾಚಾರ್ ಅವರ ತಂದೆ ಹಾಗೂ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್ ಇಂದು ನಿಧಾನರಾಗಿದ್ದಾರೆ. ಬಿಎನ್ ಗರುಡಾಚಾರ್ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ ಗರುಡಾಚಾರ್ ಅವರ ತಂದೆ ನಿಧನರಾಗಿದ್ದಾರೆ.
ಇಂದು ಬೆಂಗಳೂರಿನ ನಿವಾಸದಲ್ಲಿ ಬಿ ಎನ್ ಗರುಡಾಚಾರ್ಯ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಿಎನ್ ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಡಿಸಿಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿ ಸೇವೆ ಸಲ್ಲಿಸಿದರು. 1963 ರಲ್ಲಿ ಎನ್ ಆರ್ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು.
ಮಂಡ್ಯ ಜಿಲ್ಲೆಯ, ನಾಗಮಂಗಲ ತಾಲೂಕಿನ, ಬಿಂಡಿಗೆನವಿಲೇ ಗ್ರಾಮದ ಮೂಲದವರಾದ ಬಿ.ಎನ್.ಗರುಡಾಚಾರ್ ರವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು.
ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರವು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.