ಹುಬ್ಬಳ್ಳಿ : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆಯಾಗಿದ್ದಾರೆ. ಯತ್ನಾಳ ಉಚ್ಚಾಟನೆ ಬೆನ್ನಲ್ಲೇ ವಿಜಯಪುರ ನಗರದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು ಇದುವರೆಗೂ 174 ಜನರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಶಾಸಕ ರಾಜು ಕಾಗೆ ಹೈಕಮಾಂಡ್ ಸೂಚಿಸಿದರೆ ಯತ್ನಾಳ ಅವರನ್ನು ಕಾಂಗ್ರೆಸ್ ಗೆ ಕರೆ ತರಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹೈಕಮಾಂಡ್ ಸೂಚಿಸಿದರೆ ಯತ್ನಾಳನ್ನು ಕಾಂಗ್ರೆಸ್ ಗೆ ಕರೆ ತರಲು ನಾನು ಸಿದ್ಧ. ಯತ್ತಾಳ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಅವರಿಗೆ ಸಂಪೂರ್ಣವಾಗಿ ಸ್ವಾಗತ. ಅಕಸ್ಮಾತ್ ಹೈಕಮಾಂಡ್ ಈ ಕುರಿತು ಹೇಳಿದರೆ ಅವರನ್ನು ಪಕ್ಷಕ್ಕೆ ಕರೆತರಲು ನಾನು ಸಿದ್ಧನಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದರು.