ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಉಚ್ಚಾಟನೆ ಆದ ಎರಡು ದಿನಗಳಿಂದ ಸೈಲೆಂಟಾಗಿದ್ದ ಶಾಸಕ ಯತ್ನಾಳ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಹೌದು ಎರಡು ದಿನಗಳ ಬಳಿಕ ಮತ್ತೆ ಶಾಸಕ ಯತ್ನಾಳ್ ಆಕ್ಟಿವ್ ಆಗಿದ್ದು ಇಂದು ಬೆಂಗಳೂರಿನಲ್ಲಿ ಆಪ್ತರ ಜೊತೆ ಸಭೆ ನಡೆಯುತ್ತಿದ್ದು, ಈ ಒಂದು ಸಭೆಯಲ್ಲಿ ಭಾಗಿಯಾಗಲು ಹೈದರಾಬಾದ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಈ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಶಾಸಕ ಯತ್ನಾಳ್ ಅವರು ತೆರಳಿರುವುದು ಅವರ ಮುಂದಿನ ನಡೆಯ ಕುರಿತು ಇದೀಗ ಕುತೂಹಲ ಕೆರಳಿಸಿದೆ.
ಈ ಮೊದಲು ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಲು ರೆಬೆಲ್ ತಂಡ ತೀರ್ಮಾನಿಸಿತ್ತು. ಮಧ್ಯಾಹ್ನ 12 ಗಂಟೆಗೆ ಕುಮಾರ ಬಂಗಾರಪ್ಪ ನಿವಾಸದಲ್ಲಿ ರೆಬೆಲ್ಸ್ ಟೀಂ ಸಭೆ ನಡೆಸಲು ನಿರ್ಧರಿಸಿತ್ತು. ಆದರೆ ಇಂದು ಬೇರೆ ಕಡೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆಗೆ ಆಪ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಈ ಒಂದು ಸಭೆಗೆ ಶಾಸಕ ಯತ್ನಾಳ್ ಅವರು ಗೈರಾಗುವ ಸಾಧ್ಯತೆ ಇದೆ.