ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶೋಕಾಸ್ ನೋಟಿಸ್ ಗೆ ಉತ್ತರಿಸದ ಹಿನ್ನೆಲೆ ಹಾಗೂ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.
ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆಗೆ ಆಕ್ಷೇಪಿಸಿ, ಬೆಂಗಳೂರಿನಲ್ಲಿ ಯತ್ನಾಳ ಬಣದ ಟೀಂ ಇದೀಗ ಸಭೆ ಸೇರಿದೆ. ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಸಿದ್ದೇಶ್ವರ ನಿವಾಸದಲ್ಲಿ ಸಭೆ ಸೇರಿದ್ದಾರೆ.ಉಚ್ಚಾಟನೆ ಆದೇಶ ಪಡೆಯಲು ಒತ್ತಾಯ ಕುರಿತು ಸಭೆ ನಡೆಸುತ್ತಿದ್ದು, ಯತ್ನಾಳ್ ಉಚ್ಚಾಟನೆಗೆ ಆಕ್ಷೇಪ ವ್ಯಕ್ತಪಡಿಸಿ ಇದೀಗ ರೆಬೆಲ್ಸ್ ಟೀಂ ಸಭೆ ನಡೆಸುತ್ತಿದೆ.
ರಮೇಶ್ ಜಾರಕಿಹೊಳಿ, ಬಿಪಿ ಹರೀಶ್, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಮುಂತಾದವರು ಈಗಾಗಲೇ ಸಿದ್ದೇಶ್ವರ ನಿವಾಸಕ್ಕೆ ಆಗಮಿಸಿದ್ದಾರೆ. ಹಾಗಾಗಿ ಈ ಒಂದು ಸಭೆ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮುಂದಿನ ನಡೆ ಏನು ಎಂಬುದರ ಕುರಿತು ತೀವ್ರ ಕುತೂಹಲ ಕೆರಳಿಸಿದೆ.