ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಹಿನ್ನಲೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ವಿರುದ್ಧ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ಇಂದು ಪೊಲೀಸರ ವಶದಲ್ಲಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶರು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಹಾಗೂ ವಿನಯ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ವಿನಯ್ ಹಾಗೂ ರಜತ್ ಗೆ ತಲಾ 10 ಸಾವಿರ ರೂಪಾಯಿ ಶೂರಿಟಿಯ ಷರತ್ತು ಬದ್ಧ ಜಾಮೀನನ್ನು ಕೋರ್ಟ್ ನೀಡಿದೆ. ಈ ಮೂಲಕ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್, ವಿನಯ್ ಗೆ ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಪ್ರಕರಮದಲ್ಲಿ ಬಿಗ್ ರಿಲೀಫ್ ನೀಡಿದಂತೆ ಆಗಿದೆ.
ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus