ಬೆಂಗಳೂರು : ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ ನೀಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.