ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದ್ದು ನಟ ದರ್ಶನ್ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ಹೌದು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದ್ದು. ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿದೆ.