ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ಒಂದು ವಿದ್ಯುತ್ ಕಂಬ ಹಾಗು ಕಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ಒಂದು ಘಟನೆ ನಡೆದಿದೆ.
ಬಸ್ ಗೆ ಬೆಂಕಿ ತಗುಲಿ ಪಕ್ಕದಲ್ಲಿದ್ದ ಹಳೆ ಬೈಕ್ ಗಳು ಸಹ ಸುಟ್ಟು ಕರಕಲಾಗಿವೆ. ಖಾಸಗಿ ಬಸ್ ಗೆ ತಗುಲಿದ್ದ ಬೆಂಕಿ ಪಕ್ಕದಲ್ಲೇ ಇದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ತಗುಲಿದೆ. ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಬೈಕ್ ಗಳನ್ನು ಜಪ್ತಿ ಮಾಡಿದ್ದರು. ಬೆಂಕಿ ಹತ್ತಿಕೊಂಡ ಜಾಗದ ಬಳಿಯೇ ಪೆಟ್ರೋಲ್ ಬಂಕ್ ಕೂಡ ಇದೆ.
ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಈ ಒಂದು ಖಾಸಗಿ ಬಸ್ ಶ್ರೀನಿವಾಸ ನಾಯ್ಡು ಎಂಬವರಿಗೆ ಸೇರಿತ್ತು. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.