ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐವರ ಸಾವಾಗಿದ್ದು, 24 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಲ್ಡಾನ ಜಿಲ್ಲೆಯ ಶೇಗಾಂವ್ ಮತ್ತು ಖಮ್ಗಾಂವ್ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ.
ಎರಡು ಖಾಸಗಿ ಬಸ್ಸುಗಳು ಮತ್ತು ಬೋಲೇರೋ ಆಹಾರದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನಪ್ಪಿದ್ದು 24 ಜನರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.