ಬೆಂಗಳೂರು : ನವದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತರಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಸಹ ದೆಹಲಿಗೆ ತರಲಿದ್ದು ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ದೆಹಲಿಗೆ ತೆರಳಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಚಿವ ಈಶ್ವರ ಖಂಡ್ರೆ ಕಣ್ಣಿಟ್ಟಿದ್ದು ಈ ಕುರಿತು ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಲದೆ ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ ನಾಗೇಂದ್ರ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರುವ ತವಕದಲ್ಲಿದ್ದು, ಹೀಗಾಗಿ ಈ ಒಂದು ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ಹಗರಣ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರು, ಜೈಲಿಗೆ ಹೋಗಿ ಬಿಡುಗಡೆಯಾಗಿದ್ದರು. ಸಚಿವ ಸ್ಥಾನ ಪಡೆದೆ ಬಳ್ಳಾರಿಗೆ ಬರುವ ಬಗ್ಗೆ ನಾಗೇಂದ್ರ ಅವರು ಶತ ಮಾಡಿದ್ದರು ಹಾಗಾಗಿ ಇದೀಗ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.