ಬೆಳಗಾವಿ: ಜಿಲ್ಲೆಯಲ್ಲಿ ಶಾಸಕ ರಾಜು ಕಾಗೆ ಸಹೋದರ ಪುತ್ರನಿಂದ ಕಾರು ಅಪಘಾತ ಮಾಡಲಾಗಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ(22) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ.
ಸಣ್ಣವಿಠ್ಠಲ ದುರದುಂಡಿ, ನಿಂಗಪ್ಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬೆಳಗಾವಿಯ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಸವರಾಜ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಕಾರು ಚಲಾಯಿಸುತ್ತಿದ್ದಂತ ರಾಜು ಕಾಗೆ ಅವರ ಸಹೋರನ ಪುತ್ರ ಶ್ರೀಪಾದ್ ಎಂಬುದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ