ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು 2024-25 ನೇ ಸಾಲಿಗಾಗಿ ಉದ್ಯಮಶೀಲತೆ (Enterprenuership) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ತರಬೇತಿ ಪೂರ್ಣಗೊಳಿಸಿ ಪ್ರಮಾಣ ಪತ್ರ ಪಡೆಯುವ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಘಟಕ ವೆಚ್ಚದ ಶೇ.70 ರಷ್ಟು ಗರಿಷ್ಠ ರೂ.5.00 ಲಕ್ಷಗಳ ಸಹಾಯಧಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15, 2025 ರೊಳಗಾಗಿ ರಂಗಾಯಣ ಆವರಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.