ಬೆಂಗಳೂರು : ಬೆಂಗಳೂರಿನಲ್ಲಿ ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವೈಟ್ ಫೀಲ್ಡ್ ಡಿಸಿಪಿ ಡಾ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಧ್ಯರಾತ್ರಿ 1.30 ರ ಸುಮಾರಿಗೆ ಯುವತಿ ತನ್ನ ಸಹೋದರನ ಜೊತೆಗೆ ಊಟಕ್ಕೆ ಹೋಗುವ ವೇಳೆ ಆರೋಪಿಗಳು ಬೈಕ್ ಗೆ ಅಡ್ಡಹಾಕಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಯುವತಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಆರೋಪಿಗಳನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಆರೋಪಿಗಳು ಕೋಲಾರದ ಮುಳಬಾಗಿಲು ಮೂಲದವರು ಎಂದು ಹೇಳಲಾಗಿದೆ.