ಬೆಂಗಳೂರು : ಏಪ್ರಿಲ್ 1 ರಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ನಂದಿನಿ ಹಾಲಿನ ದರ, ವಿದ್ಯುತ್ ದರ, ಡಿಸೈಲ್ ದರ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇದರಿಂದ ಸಹಜವಾಗಿ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿ ರಾಜ್ಯ ಸರ್ಕಾರಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ತೆರಿಗೆ ಏರಿಕೆ ಮಾಡುತ್ತವೆ ಎಂದು ಸಮರ್ಥನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ತೆರಿಗೆ ಏರಿಕೆ ಮಾಡುತ್ತವೆ. ಡೀಸೆಲ್ ಮತ್ತು ಪೆಟ್ರೋಲ್ ಬೆಲೆ 2 ರೂಗೆ ಏರಿಕೆ ಸ್ವಾಭಾವಿಕ. ಕೇಂದ್ರ ಸರ್ಕಾರ ತೆರಿಗೆ ನಿಯಂತ್ರಿಸಿದರೆ ರಾಜ್ಯಗಳಿಗೆ ಅನುಕೂಲವಾಗುತ್ತದೆ.ಬೆಲೆ ಏರಿಕೆ ಕೇಂದ್ರ ಸರ್ಕಾರದ ನೀತಿಗಳಿಂದ ಆಗುತ್ತದೆ. ತೆರಿಗೆ ವಿಚಾರದಲ್ಲಿ ಕೇಂದ್ರವೇ ಹೆಚ್ಚು ನಿಯಂತ್ರಣ ಹೊಂದಿದೆ ಎಂದು ತಿಳಿಸಿದರು.