ನವದೆಹಲಿ: 12 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈಗ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ಇದೀಗ ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗೆ ತೆಗೆದುಕೊಳ್ಳಲಾಗಿದೆ.
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು ಬಿದ್ದರೆ, ವಿರುದ್ಧವಾಗಿ 232 ಮತಗಳು ಬಿದ್ದವು.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಮಸೂದೆಯನ್ನು ಮಂಡಿಸಿದರು. ಮಧ್ಯಾಹ್ನ 12 ರಿಂದ 1 ರವರೆಗೆ ನಡೆಯುವ ಪ್ರಶ್ನೋತ್ತರ ಅವಧಿಯ ನಂತರ ಮಸೂದೆಯನ್ನು ರಾಜ್ಯಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಯಿತು. ಈ ಬಳಿಕ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಾರಗೊಂಡಿತು.
ಇಂದು ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಇದೀಗ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯ ಬಳಿಕ ರಾಜ್ಯ ಸಭೆಯಲ್ಲಿ ಪರ-ವಿರೋಧದ ಚರ್ಚೆ ನಡೆಸಲಾಗುತ್ತಿದೆ. ಸಂಸತ್ತಿನ ಬಜೆಟ್ ಅಧಿವೇಶನ ಏಪ್ರಿಲ್ 4 ರಂದು ಕೊನೆಗೊಳ್ಳುವ ಮೊದಲು ಅಂಗೀಕಾರಗೊಳ್ಳುವ ಸಾಧ್ಯತೆ ಇದೆ.
`SSLC, PUC’ ಪಾಸಾದ ಯುವಕ/ಯುವತಿಯರಿಗೆ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ಗೆ ಅರ್ಜಿ ಆಹ್ವಾನ