ನವದೆಹಲಿ : ದೆಹಲಿಯಲ್ಲಿ ನೂತನವಾಗಿ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು. ದೆಹಲಿ ಪ್ರವಾಸದಲ್ಲಿ ಇರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಕುರಿತು ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಪರಿಷತ್ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಪಕ್ಷದ ಹೈಕಮಾಂಡ್ಗೆ ಸಿಎಂ ಸಿದ್ಧರಾಮಯ್ಯ ನೀಡಿದರು. ಪ್ರಾದೇಶಿಕ ಮತ್ತು ಜಾತಿವಾರು ಲೆಕ್ಕಾಚಾರದಲ್ಲಿ ಸಿಎಂ ಸಿದರಾಮಯ್ಯ ಪರಿಷತ್ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.