ದಕ್ಷಿಣಕನ್ನಡ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆಯಿತು.
ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಓರ್ವ ಪ್ರಯಾಣಿಕ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಕೂಡಲೇ ಸ್ಥಳೀಯ ಪೊಲೀಸ್ ಠಾಣಾ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.