ಬೆಂಗಳೂರು: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಿಕೊಳ್ಳುವಂತೆ ಅಧಿಕೃತವಾಗಿ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ ಹೊರಗುತ್ತಿಗೆಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆಯನ್ನು ಹೊರಡಿಸಲಾಗಿದೆ. ಅದರಲ್ಲಿ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಕುರಿತ ದಿನಾಂಕ:20.05.2024ರ ಸುತ್ತೋಲೆಯಲ್ಲಿ ಕ್ರಮ ಸಂಖ್ಯೆ 60 ಬದಲಾಗಿ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು ಎಂದಿದೆ.
ಕ್ರಮ ಸಂಖ್ಯೆ -06ರಲ್ಲಿ ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು ಎಂಬುದಾಗಿ ತಿಳಿಸಲಾಗಿತ್ತು.
ಪರಿಷ್ಕೃತ ಕಂಡಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ 2024ರ ಸೆಕ್ಷನ್ 4ರ ಸಬ್ ಸೆಕ್ಷನ್ (5) ರಾಜ್ಯ ಸಿವಿಲ್ ಸೇವೆಗಳ ವೃಂದದಲ್ಲಿನ ಅಥವಾ ಸರ್ಕಾರಿ ವಲಯದ ಸಂಸ್ಥೆಗಳಲ್ಲಿನ ಯಾವುದೇ ಹುದ್ದೆಗೆ ನೇರ ನೇಮಕಾತಿ ಕೋಟಾದ ಎದುರು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವಾ ಸರ್ಕಾರದಿಂದ ಮಾನ್ಯತೆ ಪಡೆದ ಮಾನವಶಕ್ತಿ ಪೂರೈಕೆ ಏಜೆನ್ಸಿಯು, ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ಸದಸ್ಯರಿಗೆ ನಿಯಮಿಸಬಹುದಾದ ಅಂಥ ವ್ಯಾಪ್ತಿ ಮತ್ತು ವಿಧಾನದಲ್ಲಿ ಸಾಕಷ್ಟು ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು ಎಂದಿದೆ.
ಪರಂತು, ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ತಾತ್ಕಾಲಿಕ ಆಧಾರದಲ್ಲಿರತಕ್ಕದ್ದು ಮತ್ತು ಅದನ್ನು ನೇರ ನೇಮಕಾತಿ ಕೋಟಾದ ಎದುರು ಕ್ರಮಬದ್ಧಗೊಳಿಸತಕ್ಕದ್ದಲ್ಲ:
ಮತ್ತು ಪರಂತು, ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ನೇರ ನೇಮಕಾತಿ ಎದುರಾಗಿ ಮಂಜೂರಾದ ಹುದ್ದೆಗಳ ಶೇಕಡಾ ಹತ್ತರಷ್ಟನ್ನು ಮೀರತಕ್ಕದ್ದಲ್ಲ:
ವರ್ಗಗಳ ಅಲ್ಲದೆ ಪರಂತು, ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ (ನೇಮಕಾತಿಗಳ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024ರ ಪ್ರಾರಂಭದ ದಿನಾಂಕದಂದು ಅಥವಾ ಅದಕ್ಕೆ ಮೊದಲು ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ಮಂಜೂರಾದ ಹುದ್ದೆಗಳ ಸಂಖ್ಯಾಬಲದ ಶೇಕಡಾ ಹತ್ತರಷ್ಟು ಮೀರಿದ್ದರೆ, ಆಗ ಅಂಥ ನೇಮಕಾತಿಗಳನ್ನು ಪ್ರತಿ ವರ್ಷ ಶೇಕಡಾ ಹತ್ತರಷ್ಟು ಕಡಿಮೆಗೊಳಿಸತಕ್ಕದ್ದು.
ಇನ್ನುಳಿದಂತೆ ಉಲ್ಲೇಖಿತ ಸುತ್ತೋಲೆಯ ಎಲ್ಲಾ ಅಂಶಗಳು ಯಥಾವತ್ತಾಗಿ ಜಾರಿಯಲ್ಲಿರುತ್ತವೆ ಎಂದು ಹೇಳಿದೆ.
ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ: ಉತ್ತರ ಭಾರತದಲ್ಲಿಯೂ ಕಂಪನದ ಅನುಭವ | Earthquake in Nepal