ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು ಈ ಕುರಿತು ಏಪ್ರಿಲ್ 22ರಂದು ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಪ್ರಕಟಿಸಲಿದೆ. ಮೇ 11ರಂದು ಮತದಾನ ನಡೆಯಲಿದ್ದು ಮೇ 14ರಂದು ಫಲಿತಾಂಶ ಹೊರಬೀಳಲಿದೆ.
ಹೌದು ಗ್ರಾಮ ಪಂಚಾಯತಿ ಉಪಚುನಾವಣೆಗೆ ಇದೀಗ ದಿನಾಂಕ ಘೋಷಣೆಯಾಗಿದ್ದು, ರಾಜ್ಯ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದು, ಮೇ 11 ರಂದು ಮತದಾನ ಮತ್ತು ಮೇ 14 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದ ಒಟ್ಟು 222 ಗ್ರಾಮ ಪಂಚಾಯತಿಗಳ, 260 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮೇ 11 ರಂದು ಮತದಾನ ನಡೆಯಲಿದ್ದು, ಮೇ 14ರಂದು ಗ್ರಾಮ ಪಂಚಾಯಿತಿ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ.