ಕಲಬುರಗಿ : ಇಂದು ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹೂಬೂಬ್ ಮೃತಪಟ್ಟಿದ್ದು, ಮೃತರು ಬಾಗಲಕೋಟೆ ಮೂಲದವರು ಎಂದು ಗುರುತಿಸಲಾಗಿದೆ.
ಭೀಕರ ಅಪಘಾತದಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನೆಲೋಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.