ಬೆಂಗಳೂರು : ಇತ್ತೀಚಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವ ಘಟನೆ ಒಂದು ನಡೆದಿದ್ದು, ರಸೇಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರ ಮೇಲೆ ಯುವಕನೊಬ್ಬ ಹಿಂದಿನಿಂದ ಬಂದು ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು ಬೆಂಗಳೂರಿನ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದಿದ್ದು, ನಡೆದು ಹೋಗುತ್ತಿದ್ದ ಹೆಣ್ಣು ಮಕ್ಕಳ ಜೊತೆಗೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಭಾರತಿ ಲೇಔಟ್ ನ 1ನೇ ಕ್ರಾಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಏಪ್ರಿಲ್ 3 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸುದ್ಧಗುಂಟೆ ಪೊಲೀಸ್ ಠಾಣೆಯಿಂದ ಯುವತಿ ಮತ್ತು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.