ದಾವಣಗೆರೆ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಅಪ್ರಾಪ್ತ ಬಾಲಕನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರ ಹಿಂಸೆ ನೀಡಿದಂತ ಘಟನೆ ಚನ್ನಗಿರಿಯ ಅಸ್ಯಾಪನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಹತ್ತು ಆರೋಪಿಗಳಲ್ಲಿ ಮೂವರನ್ನು ಬಂದಿಸಿದ್ದಾರೆ.
ಏಪ್ರಿಲ್.4ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಅಸ್ತಾಪನಹಳ್ಳಿಯಲ್ಲಿ ಬಾಲಕನನ್ನು ಕಳ್ಳತನ ಮತ್ತು ಮಹಿಳೆಯರ ಜೊತೆಗೆ ಅಸಭ್ಯ ವರ್ತನೆ ಸಂಬಂಧಿಸಿದಂತೆ ಹಿಡಿದು ಅಡಿಕೆ ಗಿಡಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಲಾಗಿತ್ತು. ಅಲ್ಲದೇ ಬಾಲಕನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ಮಾಡಲಾಗಿತ್ತು.
ಈ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಬಗ್ಗೆ ಚನ್ನಗಿರಿ ಪೊಲೀಸರಿಗೆ ಬಾಲಕನ ತಾತ ದೂರು ನೀಡಿದ್ದರು. ಈ ದೂರು ಆಧರಿಸಿ ಸುಭಾಷ್ (23), ಲಕ್ಕಿ(21) ದರ್ಶನ್ (22), ಪರಶು (25) ಶಿವದರ್ಶನ್ (23) ಹರೀಶ್ (25), ಪಟ್ಟಿ ರಾಜು(20), ಭೂಣಿ (18) ಸುಧನ್ ಅಲಿಯಾಸ್ ಮಧುಸೂಧನ್ (30) ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇವರಲ್ಲಿ ಮೂವರನ್ನು ಬಂದಿಸಿದ್ದಾರೆ. ಇತರೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.