ಬೆಂಗಳೂರು : ಪತಿಗೆ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಇದೆ ಎಂದು ಮನನೊಂದ ಪತ್ನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ತಿಳಿಬಂದಿದೆ.
ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ.ಆದರೆ ಪೋಷಕರು ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.