ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶೇ.93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಪ್ರಥಮ ಸ್ಥಾನ ಗಳಿಸಿದರೇ, ಶೇ.73.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಸ್ಕ್ಟಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಆ ಮಾಹಿತಿ ಮುಂದಿದೆ ಓದಿ.
2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿ KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗಿರುತ್ತದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಹಾಗೂ ಮರು ಮೌಲ್ಯ ಮಾಪನ ಶುಲ್ಕವನ್ನು ಪಾವತಿಸಲು ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಚಲನ್ ಮುಖಾಂತರ ಪಾವತಿಸಲು ಅವಕಾಶವಿರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆ ತಿಳಿಸಿದೆ.
ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ 08-04-2025ರಿಂದ 13-04-2025ರವರೆಗೆ ಅವಕಾಶ ನೀಡಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಡೌನ್ ಲೋಡ್ ಮಾಡಿಕೊಳ್ಳಲು ದಿನಾಂಕ 12-04-2025ರಿಂದ 16-04-2025ರವರೆಗೆ ನೀಡಲಾಗಿದೆ.
ಇನ್ನೂ ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರುಏಣಿಕೆಗಾಗಿ ಅರ್ಜಿ ಸಲ್ಲಿಸಲು ದಿನಾಂಕ 12-04-2025ರಿಂದ 17-04-2025ರವರೆಗೆ ಅವಕಾಶ ನೀಡಲಾಗಿದೆ.
ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ ರೂ.530 ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಮರು ಮೌಲ್ಯ ಮಾಪನಕ್ಕೆ ಪ್ರತಿ ವಿಷಯಕ್ಕೆ ರೂ.1.670 ಶುಲ್ಕವನ್ನು ನಿಗದಿ ಪಡಿಸಲಾಗಿದೆ.
ಯಾವುದೇ ಅಭ್ಯರ್ಥಿಗಳು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ. ಯಾವುದೇ ಸಂದರ್ಭದಲ್ಲಿ ಕರ್ನಾಟಕ ಪ್ರೀ ಯೂನಿವರ್ಸಿಟಿ ಕೋರ್ಸ್ ಎಸ್ ಎಲ್ ಪಿ ಇ 1997, 29(ಎ) ಪ್ರಕಾರ ಈ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತ್ರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರುಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-1ರ ಅಂಕಗಳೆಂದು ಪರಿಗಣಿಸಲಾಗುವುದು ಎಂದಿದೆ.
ವರದಿ: ವಸಂತ ಬಿ ಈಶ್ವರಗೆರೆ