ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಚಿಕ್ಕಬಳ್ಳಾಪುರದಲ್ಲಿ ಕೃಷಿಹೊಂಡದಲ್ಲಿ ಮುಳುಗಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಶಾಲೆಗೆ ರಜೆಯಿದ್ದ ಕಾರಣ ತಾಯಿ ಜೊತೆ ತೋಟಕ್ಕೆ ಹೋಗಿದ್ದ ರಾಧಾ (17) ಸಾಹಿತಿ (14) ಕೃಷಿ ಹೊಂಡಕ್ಕೆ ಅಳವಡಿಸಿದ್ದ ಪೈಪ್ ಸರಿ ಮಾಡಲು ಹೋಗಿ ಇಬ್ಬರು ಕಾಲುಜಾರಿ ನೀರಿಗೆ ಬಿದ್ದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.