ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗ ನಟ ದರ್ಶನ್‌ಗೆ ತಪ್ಪದೇ ಹಾಜರಾಗಬೇಕು ಎಂದು ಬೆಂಗಳೂರು ನ್ಯಾಯಾಲಯದ ನ್ಯಾಯಧೀಶರು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದ್ದಾರೆ.
ಮಂಗಳವಾರ (ಏಪ್ರಿಲ್ 8) ಬೆಂಗಳೂರು ನಗರ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ಕೇಸ್‌ನ ವಿಚಾರಣೆ ಇತ್ತು ಇಂದು ನಟ ದರ್ಶನ್ ಹೊರತು ಪಡಿಸಿ, 16 ಆರೋಪಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ದರ್ಶನ್ ಪರ ವಕೀಲರು ಅನಾರೋಗ್ಯ ಕಾರಣಕ್ಕೆ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು., ಮತ್ತೆ ದರ್ಶನ್‌ಗೆ ಆರೋಗ್ಯ ಸಮಸ್ಯೆಯಾಗಿದೆ ಎನ್ನಲಾಗಿದೆ ನಟನ ಪರ ವಕೀಲರು ನೀಡಿದ್ದು. ಏಪ್ರಿಲ್ 2 ರಂದು ನಡೆಸಿದ ಕೋರ್ಟ್ ನಟನ ಪರ ವಕೀಲರಿಗೆ ಅಗತ್ಯ ದಾಖಲೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಏಪ್ರಿಲ್ 22 ಕ್ಕೆ ಮುಂದೂಡಿತ್ತು.