ಬೆಂಗಳೂರು: ಮನೆಗೆಲಸ ಮಾಡುತ್ತಿದ್ದಂತ ಮನೆಯಲ್ಲಿ ವಜ್ರ, ಚಿನ್ನಾಭರಣ ಕಳವು ಮಾಡಿದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನಾಭರಣ, ವಜ್ರವನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಓರ್ವ ಮಹಿಳೆಯನ್ನು ಮನೆಕೆಲಸಕ್ಕೆಂದು ನೇಮಕ ಮಾಡಿಕೊಂಡಿದ್ದು, ಮನೆ ಕೆಲಸದಾಕೆಯು ದಿನಾಂಕ:15/03/2025 ರಂದು ಪಿರಾದುದಾರರ ಮನೆಯ ಬೀರುವಿನಲ್ಲಿಟ್ಟಿದ್ದ 128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ ಎಂದಿದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:25/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಮನೆಕೆಲಸದಾಕೆಯು ವಾಸವಿರುವ ಮನೆಯಲ್ಲಿ ನೋಟೀಸ್ ಜಾರಿ ಮಾಡಿದ್ದು, ಮನೆ ಕೆಲಸದಾಕೆಯು ದಿನಾಂಕ:26/03/2025 ರಂದು ಪಿರಾದುದಾರರ ಮನೆಯಲ್ಲಿ ಕಳವು ಮಾಡಿದ 128 ಚಿನ್ನಾಭರಣಗಳು ಮತ್ತು ವಜದ ಆಭರಣಗಳನ್ನು ಠಾಣೆಯಲ್ಲಿ ತಂದು ಹಾಜರುಪಡಿಸಿದ್ದನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆರೋಪಿತೆಗೆ ತನಿಖೆಗೆ ಸಹಕರಿಸಲು ನೋಟಿಸ್ ನೀಡಿ ಕಳುಹಿಸಲಾಗಿರುತ್ತದೆ ಎಂದು ಹೇಳಿದೆ.
ಈ ಪ್ರಕರಣದ ಆರೋಪಿತೆಯ ವಶದಿಂದ ಒಟ್ಟು 128 ಗ್ರಾಂ ಚಿನ್ನಾಭರಣ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 10,00,000/- (ಹತ್ತು ಲಕ್ಷ ರೂಪಾಯಿ) ಆಗಿರುತ್ತದೆ ಎಂದಿದೆ.
ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್ ಕಮೀಷನರ್, ಮೈಕೋಲೇಔಟ್ ಉಪ-ವಿಭಾಗ ರವರ ಮಾರ್ಗದರ್ಶನದಲ್ಲಿ, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಬಿ. ಛಾಯಾಗೋಳ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿಯಶಸ್ವಿಯಾಗಿರುತ್ತಾರೆ ಎಂದು ಹೇಳಿದೆ.
BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ