Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಯಾವುದೇ ನೋಟಿಫಿಕೇಶನ್ ಇಲ್ಲದಿದ್ದರೂ ಪದೇ ಪದೇ ಮೊಬೈಲ್ ನೋಡ್ತಿರ್ತೀರಾ? ಇದರ ಹಿಂದಿರುವ ಅಸಲಿ ‘ಮೈಂಡ್ ಗೇಮ್’ ಬಿಚ್ಚಿಟ್ಟ ಸಂಶೋಧನೆ!

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

​ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ವಿಶ್ವಮಟ್ಟದಲ್ಲಿ ಪ್ರಧಾನಿಗೆ ಒಲಿದ 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಕನಕಪುರ ರಸ್ತೆಯಲ್ಲಿ 2 ಸ್ಥಳಗಳ ಪರಿಶೀಲನೆ ನಡೆಸಿದ ಎಎಐ ತಂಡ
KARNATAKA

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಕನಕಪುರ ರಸ್ತೆಯಲ್ಲಿ 2 ಸ್ಥಳಗಳ ಪರಿಶೀಲನೆ ನಡೆಸಿದ ಎಎಐ ತಂಡ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.

ನಾಳೆಯೂ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ.

ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ.
ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.

ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.

ಬೆಂಗಳೂರಲ್ಲಿ ಇಬ್ಬರು ಕಳ್ಳರ ಬಂಧನ: 34.27 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ, ನಗದು ವಶಕ್ಕೆ

BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ

BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

2 Mins Read

ಉದ್ಯಮಿ ‘ಟಿಪ್ ಟಾಪ್’ ಬಷೀರ್ ಜನ್ಮದಿನ: ಸಾಗರದ ಉಪವಿಭಾಗೀಯ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

1 Min Read

ಮದ್ದೂರು ನಗರಸಭೆಗೆ ಸಿಎಸ್ಆರ್ ನೆರವು; ಮದ್ದೂರು ಶಾಸಕ ಕೆ.ಎಂ.ಉದಯ್

1 Min Read
Recent News

​ಯಾವುದೇ ನೋಟಿಫಿಕೇಶನ್ ಇಲ್ಲದಿದ್ದರೂ ಪದೇ ಪದೇ ಮೊಬೈಲ್ ನೋಡ್ತಿರ್ತೀರಾ? ಇದರ ಹಿಂದಿರುವ ಅಸಲಿ ‘ಮೈಂಡ್ ಗೇಮ್’ ಬಿಚ್ಚಿಟ್ಟ ಸಂಶೋಧನೆ!

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

​ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ವಿಶ್ವಮಟ್ಟದಲ್ಲಿ ಪ್ರಧಾನಿಗೆ ಒಲಿದ 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ!

​ಟೆಲಿಗ್ರಾಂ ಆ್ಯಪ್‌ಗೆ ಕೇಂದ್ರದ ಶಾಕ್: ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿದ ಗೂಗಲ್; ಶೀಘ್ರದಲ್ಲೇ ಆಪಲ್‌ನಿಂದಲೂ ಔಟ್!

State News
KARNATAKA

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ನವದೆಹಲಿ: ದೇಶದ ಪ್ರಮುಖ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಅಸ್ತಿತ್ವದ ಶತಮಾನೋತ್ಸವದ (100 ವರ್ಷ) ಸಂದರ್ಭದಲ್ಲಾದರೂ ತನ್ನ…

ಉದ್ಯಮಿ ‘ಟಿಪ್ ಟಾಪ್’ ಬಷೀರ್ ಜನ್ಮದಿನ: ಸಾಗರದ ಉಪವಿಭಾಗೀಯ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮದ್ದೂರು ನಗರಸಭೆಗೆ ಸಿಎಸ್ಆರ್ ನೆರವು; ಮದ್ದೂರು ಶಾಸಕ ಕೆ.ಎಂ.ಉದಯ್

BIG BREAKING: ರಾಜ್ಯದಲ್ಲಿ ಖಾಸಗಿ ದೃಶ್ಯ, ಚಿತ್ರಗಳ ಹಂಚಿಕೆ ಅಪರಾಧ: ಇನ್ಮುಂದೆ ‘FIR’ ದಾಖಲಿಸುವುದು ಕಡ್ಡಾಯ, ಸರ್ಕಾರದ ಆದೇಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.