ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನಿಯೋಜನೆಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಅಧಿಕೃತ ಜ್ಞಾಪನವನ್ನು ಹೊರಡಿಸಿದ್ದಾರೆ. ಅದರಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನ ಮೇಲಿರುವ ಶಿಕ್ಷಕರುಗಳನ್ನು ಮಾರ್ಚಿ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ ಎಂದು ಹೇಳಿದ್ದಾರೆ.
ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು – ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರುಗಳನ್ನು ಕೂಡಲೆ ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸತಕ್ಕದ್ದು ಹಾಗೂ ಬಿಡುಗಡೆಗೊಂಡ ಶಿಕ್ಷಕರು ದಿನಾಂಕ: 09/04/2025 ರೊಳಗೆ ಮೂಲ ಶಾಲೆಯಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು, ಒಂದು ವೇಳೆ ನಿಗದಿತ ದಿನಾಂಕದೊಳಗೆ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಶಿಕ್ಷಕರನ್ನು ಅನಧಿಕೃತ ಗೈರು ಹಾಜರಿ ಪ್ರಕರಣ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲು ತಿಳಿಸಿದ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರ ವೇತನವನ್ನು ಪಾವತಿಸದೇ ತಡೆಹಿಡಿಯಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ವೇತನ ಬಟವಾಡೆ ಅಧಿಕಾರಿಗಳನ್ನೇ ನೇರಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿರುವ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ದಿನಾಂಕ: ಹಾಜರಾಗಿರುವ ಶಿಕ್ಷಕರ ಜಿಲ್ಲಾವಾರು ಪಟ್ಟಿಯನ್ನು ನಮೂನೆಯಲ್ಲಿರುವಂತೆ 17/04/20250 ಒಳಗಾಗಿ ಈ ಕಛೇರಿಗೆ ಕಳುಹಿಸಲು ತಿಳಿಸಿದೆ ತಪ್ಪಿದಲ್ಲಿ ಅಂತಹ ಉಪನಿರ್ದೇಶಕರು(ಆಡಳಿತ) ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಂಬಂಧಿಸಿದ ಸಿಬ್ಬಂಧಿಗಳ ವಿರುದ್ಧ ಕರ್ತವ್ಯ ನಿರ್ಲಕ್ಷತೆ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲೊಂದು ಮನಕಲಕುವ ಘಟನೆ: ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ 7ನೇ ತರಗತಿ ಬಾಲಕಿ ನೇಣಿಗೆ ಶರಣು
BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ
BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ